Thursday, June 4, 2026
Homeತಾಜಾ ಸುದ್ದಿರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ; ರಾಜ್ಯ ಸರ್ಕಾರದಿಂದ ಆದೇಶ

ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ; ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂಮದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದರೆ ಸೆಲೆಬ್ರೆಟಿಗಳು, ಗಣ್ಯವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ. 

ಅಷ್ಟೇಅಲ್ಲದೇ ಶಾಲಾ ಸಂಸ್ಥೆಯಲ್ಲಿ ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಆಚರಿಸುವುದರಿಂದ ಕೆಲವು ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಎಂದು ಬೇಜಾರಾಗುತ್ತದೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!