Sunday, June 7, 2026
Homeತಾಜಾ ಸುದ್ದಿತಮ್ಮ ಆಯ್ತು, ತಂದೆ ಆಯ್ತು  ಇದೀಗ ಅಣ್ಣ ; ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ...

ತಮ್ಮ ಆಯ್ತು, ತಂದೆ ಆಯ್ತು  ಇದೀಗ ಅಣ್ಣ ; ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ

- Advertisement -
- Advertisement -

ಹಾಸನ: ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಂತಾಯ್ತು, ತಂದೆ ಮಾಜಿ ಸಚಿವ, ಶಾಸಕ ರೇವಣ್ಣ ಜೈಲು ಸೇರಿದ್ದಾಯ್ತು. ಇದೀಗ ಇದೇ ಕುಟುಂಬದ ಮತ್ತೋರ್ವ ವಿರುದ್ಧ ಇಂತದಹ್ಹೇ ಆರೋಪವೊಂದು ಕೇಳಿ ಬಂದಿದೆ. ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.

ಜೆಡಿಎಸ್ ಕಾರ್ಯಕರ್ತರೊಬ್ಬರು ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.ಅಲ್ಲದೇ ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿ ಮತ್ತು ಐಜಿಪಿ ಹಾಗೂ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ. ಅದರಲ್ಲಿ ಜೂನ್.16ರಂದು ಸೂರಜ್ ರೇವಣ್ಣ ಅವರು ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು, ಬಲವಂತವಾಗಿ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತರೊಬ್ಬರು ಸಲ್ಲಿಸಿದಂತ ದೂರಿನ ಹಿನ್ನಲೆಯಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಹೆಚ್.ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ನಂತ್ರ ಈಗ ಸೂರಜ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ.

- Advertisement -

Latest News

error: Content is protected !!