- Advertisement -
![]()
- Advertisement -
ಉಪ್ಪಿನಂಗಡಿಯಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಉಪ್ಪಿನಂಗಡಿಯ ಮುಖ್ಯ ಪೇಟೆಯಲ್ಲಿರುವ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಹಲವು ಅಂಗಡಿಗಳು ಬೆಂಕಿಯ ಕೆನ್ನಾಲಿಗೆಗೆ ಭಸ್ಮವಾಗಿದವೆ.
ನೂರಾರು ಜನ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಅಂಗಡಿಯವರು ಬೆಂಕಿಯನ್ನು ಆರಿಸಲು ಯತ್ನಿಸಿದರಾದರೂ ಅದಾಗಲೇ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿತ್ತು ಎನ್ನಲಾಗಿದೆ.
ಸದ್ಯ ಬೆಂಕಿ ನಂದಿಸುವ ಕಾರ್ಯ ಭರದಿಂದ ನಡೆಯುತ್ತಿದ್ದು, ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ ಎನ್ನಲಾಗಿದೆ. ಯಾವುದೇ ಜೀವ ಹಾನಿಯಾದ ಬಗ್ಗೆ ಇದುವರೆಗೂ ವರದಿಯಾಗಿಲ್ಲ.
- Advertisement -


