Friday, June 5, 2026
Homeತಾಜಾ ಸುದ್ದಿಸೂರಜ್ ರೇವಣ್ಣ ಪ್ರಕರಣದ ಬಗ್ಗೆ ನನ್ನ ಬಳಿ ಏನು ಕೇಳಬೇಡಿ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ...

ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ನನ್ನ ಬಳಿ ಏನು ಕೇಳಬೇಡಿ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ

- Advertisement -
- Advertisement -

ಚಿಕ್ಕಬಳ್ಳಾಪುರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಬೆನ್ನಲ್ಲೇ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಈ ಬಗ್ಗೆ  ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ಕೇಳಿದಾಗ ಗರಂ ಆಗಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ಬಳಿಯಲ್ಲಿ ಸುದ್ದಿಗಾರರು ಕೇಳಿದಂತ ಪ್ರಶ್ನೆಗೆ ಗರಂ ಆದಂತ ಅವರು, ದಯವಿಟ್ಟು ಇಂತಹ ವಿಷಯಗಳನ್ನು ನನ್ನ ಬಳಿ ಚರ್ಚೆ ಮಾಡಬೇಡಿ.ಇದನ್ನು ಬಿಟ್ಟು ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿ, ಚರ್ಚೆ ಮಾಡಿ ಅಂದರು.

ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಕೇಳುವ ಅವಶ್ಯಕತೆ ಏನಿದೆ.? ಅದಕ್ಕಾಗಿ ಕಾನೂನು ಇದೆ. ಅದರ ಅಡಿಯಲ್ಲಿ ಪೊಲೀಸರು ಕ್ರಮ ವಹಿಸಲಿದ್ದಾರೆ. ಯಾಕೆ ಪ್ರಕರಣ ಬರ್ತಿದೆ ಅನ್ನೋದು ಮುಂದಿನ ದಿನಗಳಲ್ಲಿ ನಿಮಗೆ ಗೊತ್ತಾಗಲಿದೆ. ಇನ್ಮುಂದೆ ನನ್ನ ಬಳಿ ಇಂತಹ ಪ್ರಶ್ನೆಗಳನ್ನು ಕೇಳಬೇಡಿ ಎಂದಿದ್ದಾರೆ.

- Advertisement -

Latest News

error: Content is protected !!