Friday, June 5, 2026
Homeಕರಾವಳಿಮಂಗಳೂರುಸುಳ್ಯದಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಸುಳ್ಯದಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

- Advertisement -
- Advertisement -

ಸುಳ್ಯ: ಬಿಜೆಪಿ ಸುಳ್ಯ ಮಂಡಲ ಕಚೇರಿಯನ್ನು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.

ಅಂಬಟೆಡ್ಕದಲ್ಲಿ ನೂತನವಾಗಿ ಮಂಡಲ ಕಚೇರಿಯನ್ನು ನಿರ್ಮಿಸಲಾಗಿದ್ದು, ಟೇಪ್ ಕತ್ತರಿಸಿ ಮತ್ತು ಜ್ಯೋತಿ ಬೆಳಗುವ ಮೂಲಕ ಯಡಿಯೂರಪ್ಪ ಉದ್ಘಾಟಿಸಿದರು‌.

ಈ ಸಂಧರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್. ಅಂಗಾರ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ, ಜೆಡಿಎಸ್ ತಾಲೂಕು ಅಧ್ಯಕ್ಷ ಸುಕುಮಾರ ಕೋಡ್ತುಗುಳಿ, ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಉಪಸ್ಥಿತರಿದ್ದರು.

ಇದೇ ವೇಳೆ, ಎಸ್.ಎನ್. ಮನ್ಮಥ, ಎ.ವಿ. ತೀರ್ಥರಾಮ, ಹರೀಶ್ ಕಂಜಿಪಿಲಿ ಸೇರಿದಂತೆ ಸುಳ್ಯ ತಾಲೂಕಿನ ಬಿಜೆಪಿ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕುಕ್ಕೆ ಸುಬ್ರಮಣ್ಯದಿಂದ ಸುಳ್ಯಕ್ಕೆ ಆಗಮಿಸಿದ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.

- Advertisement -

Latest News

error: Content is protected !!