Sunday, October 18, 2026
Homeಕರಾವಳಿನಾಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

ನಾಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

- Advertisement -
- Advertisement -

ಕಡಬ: ಉಪಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ನಾಳೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ನಾಳೆ ಬೆಳಗ್ಗೆ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದ ಮೂಲಕ ಆಗಮಿಸಲಿರುವ ಡಿ.ಕೆ. ಶಿವಕುಮಾರ್, ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಲಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಡಿಸಿಎಂ, ಬಳಿಕ ಮಂಗಳೂರಿಗೆ ತೆರಳಿ ನಾಳೆ ರಾತ್ರಿ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.

ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ತುಲಾಭಾರ ಸೇವೆ ಸಲ್ಲಿಸಿದ್ದರು.‌

- Advertisement -

Latest News

error: Content is protected !!