Thursday, June 4, 2026
Homeಕರಾವಳಿಮಂಗಳೂರುಸುಳ್ಯ; ನಾಪತ್ತೆಯಾದ ವ್ಯಕ್ತಿಯ ಶವ ಪಯಸ್ವಿನಿ ನದಿಯಲ್ಲಿ ಪತ್ತೆ

ಸುಳ್ಯ; ನಾಪತ್ತೆಯಾದ ವ್ಯಕ್ತಿಯ ಶವ ಪಯಸ್ವಿನಿ ನದಿಯಲ್ಲಿ ಪತ್ತೆ

- Advertisement -
- Advertisement -

ಸುಳ್ಯ; ನಾಪತ್ತೆಯಾದ ವ್ಯಕ್ತಿಯೊಬ್ಬರ ಶವ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಘಟನೆ ಸುಳ್ಯದ ಭಸ್ಮಡ್ಕ ಎಂಬಲ್ಲಿ ನಡೆದಿದೆ. ಕುಮಾರ್ ಕುರುಂಜಿಗುಡ್ಡೆ ಮೃತ ವ್ಯಕ್ತಿ.

ವಿಶೇಷ ಚೇತನರಾದ ಕುಮಾರ್ ಅವರು ಭಾನುವಾರ ಮಧ್ಯಾಹ್ನದ ನಂತರ ನಾಪತ್ತೆಯಾಗಿದ್ದರು. ಎಲ್ಲಾ ಕಡೆ ಹುಡುಕಾಡಿದ್ರೂ ಅವರ ಸುಳಿವು ಲಭ್ಯವಾಗಿರಲಿಲ್ಲ. ಬಳಿಕ ಭಸ್ಮಡ್ಕ ಎಂಬಲ್ಲಿ ಪಯಸ್ವಿನಿ ನದಿಯ ದಡದಲ್ಲಿ ಅವರ ಚಪ್ಪಲಿ ಪತ್ತೆಯಾಗಿತ್ತು..

ಹೀಗಾಗಿ ಸೋಮವಾರ ಬೆಳಗ್ಗಿನಿಂದಲೇ ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞರ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು. ಆದರೆ ಇಂದು ಬೆಳಗ್ಗಿನವರೆಗೆ ಅವರು ಪತ್ತೆಯಾಗಿರಲಿಲ್ಲ.  ಹೀಗಾಗಿ ಸ್ವಲ್ಪ ದೂರ ಹೋಗಿ ಹುಡುಕಾಟ ನಡೆಸಲಾಗಿತ್ತು.  ಈ ವೇಳೆ  ಸುಮಾರು 1 ಕಿ.ಮೀ. ದೂರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

- Advertisement -

Latest News

error: Content is protected !!