Saturday, June 6, 2026
Homeತಾಜಾ ಸುದ್ದಿಮೃತ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಸಹೋದರಿಗೆ ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಸಿಎಂ

ಮೃತ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಸಹೋದರಿಗೆ ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಸಿಎಂ

- Advertisement -
- Advertisement -

ಬೆಂಗಳೂರು: ಡಿ ಗ್ಯಾಂಗ್ ನಿಂದ ಕೊಲೆಯಾದ ಚಿತ್ರದುರ್ಗ ಮೂಲದ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಸಹೋದರಿಗೆ ಸರ್ಕಾರ ಸರ್ಕಾರಿ ಉದ್ಯೋಗ ನೀಡಬೇಕು ಎಂಬ ಅಭಿಪ್ರಾಯ ಎಲ್ಲೆಡೆ ಕೇಳಿ ಬರುತ್ತಿದೆ. ಹೀಗಿರುವಾಗಲೇ ಸಿಎಂ ಸಿದ್ದರಾಮಯ್ಯ ರೇಣುಕಾಸ್ವಾಮಿ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ಕೊಟ್ಟಿದ್ದಾರೆ.

ಇಂದು ರೇಣುಕಾಸ್ವಾಮಿ ಅವರ ತಂದೆ, ತಾಯಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡರು. ಜೊತೆಗೆ ಪೊಲೀಸ್ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದರು.

ಇದೇ ಸಂದರ್ಭದಲ್ಲಿ ತಮ್ಮ ಮಗಳಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದರು. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕವಾಗೇ ಸ್ಪಂದಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!