Thursday, June 25, 2026
Homeಕರಾವಳಿಮಂಗಳೂರುಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪೂಜೆ ಸಲ್ಲಿಕೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪೂಜೆ ಸಲ್ಲಿಕೆ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು.‌ಕುಟುಂಬ ಸಮೇತ ದೇವಸ್ಥಾನಕ್ಕೆ ಭೇಟಿ ‌ನೀಡಿದ ಡಿ.ಕೆ. ಶಿವಕುಮಾರ್, ಆಶ್ಲೇಷ ಪೂಜೆ ಮತ್ತು ಮಹಾ ಪೂಜೆಯಲ್ಲಿ ಭಾಗಿಯಾದರು.

ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಗಳನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಇದೇ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ವಾದ್ಯ ಮೇಳದೊಂದಿಗೆ ಸ್ವಾಗತ ಕೋರಲಾಯಿತು.ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ಡಿ.ಕೆ. ಶಿವಕುಮಾರ್ ಕುಟುಂಬ ದೇವಸ್ಥಾನದ ಆನೆಯ ಆಶೀರ್ವಾದವನ್ನೂ ಪಡೆದರು‌.‌

ಇದಕ್ಕೂ ಮುನ್ನ ಇಂದು ಬೆಳಗ್ಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರನ್ನು ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ‌ದೇವಸ್ಥಾನಕ್ಕೆ ಭೇಟಿ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಂ ಡಿಕೆಶಿಗೆ ಸಾಥ್ ನೀಡಿದ್ರು.

- Advertisement -

Latest News

error: Content is protected !!