Wednesday, June 3, 2026
Homeಅಪರಾಧವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ; ಸಿಐಡಿ ತನಿಖೆಗೆ ವರ್ಗಾವಣೆ

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ; ಸಿಐಡಿ ತನಿಖೆಗೆ ವರ್ಗಾವಣೆ

- Advertisement -
- Advertisement -

ಬೆಂಗಳೂರು: ನಗರದ ಸುಬ್ರಹ್ಮಣ್ಯ ಪುರದ ಬೃಂದಾವನ ಲೇಔಟ್‌ನಲ್ಲಿ ಕಳೆದ ತಿಂಗಳು ನಡೆದಿದ್ದ ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಇದೀಗ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದೆ.

ಕೊಲೆ ಯಾದ ಪ್ರಭುದ್ಯಾ ತಾಯಿ ಸಾಮಾಜಿಕ ಕಾರ್ಯಕರ್ತೆ ಕೆ.ಆರ್‌. ಸೌಮ್ಯಾ ಅವರು  ಸೋಮವಾರದಂದು ಸಾಮಾಜಿಕ ಕಾರ್ಯಕರ್ತೆಯರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ರಿಯ ಭೀಕರ ಕೊಲೆ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವಂತೆ ಮನವಿ ಮಾಡಿದ್ದರು.

ಈ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವಂತೆ ಸೂಚಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಪ್ರಭುದ್ಯಾ, ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಬಿಎ ವಿದ್ಯಾರ್ಥಿಯಾಗಿದ್ದು ತಾಯಿ ಮತ್ತು ಸಹೋದರನ ಜತೆಗೆ ಬೃಂದಾವನ ಲೇಔಟ್‌ನಲ್ಲಿ ನೆಲೆಸಿದ್ದಳು. ಮೇ 15ರಂದು ಸಂಜೆ ಮನೆಯ ಬಾತ್‌ ರೂಮ್‌ನಲ್ಲಿ ಪ್ರಭುದ್ಯಾಳ ಬಲ ಕುತ್ತಿಗೆ ಮತ್ತು ಎಡಗೈ ಕೊಯ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಬಳಿಕ ಆಕೆಯ ತಾಯಿ ಸೌಮ್ಯಾ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದಾಗ, ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಅಪ್ರಾಪ್ತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೊಲೆ ರಹಸ್ಯ ಬಯಲಾಗಿತ್ತು. 2 ಸಾವಿರ ರೂ. ಸಾಲದ ವಿಚಾರಕ್ಕೆ ಪರಿಚಿತ ಅಪ್ರಾಪ್ತ ಪ್ರಭುದ್ಯಾ ಜತೆಗೆ ಜಗಳ ತೆಗೆದು ಚಾಕುವಿನಿಂದ ಕತ್ತು ಮತ್ತು ಕೈ ಕೊಯ್ದು ಕೊಲೆ ಮಾಡಿದ್ದ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

- Advertisement -

Latest News

error: Content is protected !!