Thursday, June 4, 2026
Homeಕರಾವಳಿಮಂಗಳೂರುಮಂಗಳೂರು; ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

ಮಂಗಳೂರು; ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

- Advertisement -
- Advertisement -

ಮಂಗಳೂರು; ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.ಮನೆಯೊಳಗಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳು.

ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣ ಕಾರ್ಯಾಚರಣೆ ನಡೆಸಲಾಗಿದೆ. ಮೂವರ ಶವಗಳನ್ನು ಹೊರ ತೆಗೆಯಲಾಗಿದೆ.ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಬೂಬಕ್ಕರ್ ಎಂಬವರಿಗೆ ಸೇರಿದ ಕಾಂಪೌಂಡ್ ಕುಸಿದು ದುರಂತ ಸಂಭವಿಸಿದೆ ಎನ್ನಲಾಗಿದೆ.ಸ್ಥಳೀಯರು ಮೂವರ ಮೃತದೇಹಗಳನ್ನು ಹೊರತೆಗೆದಿದ್ದು ಬಾಲಕಿ ಮೃತದೇಹ ಹೊರ ತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!