Friday, June 5, 2026
HomeUncategorizedಮಂಗಳೂರು; ವಿದ್ಯುತ್ ತಂತಿ ತಗುಲಿ ಉಪ್ಪಿನಂಗಡಿ ಮೂಲದ ಆಟೋ ಚಾಲಕ ಸೇರಿದಂತೆ ಇಬ್ಬರು ಸಾವು

ಮಂಗಳೂರು; ವಿದ್ಯುತ್ ತಂತಿ ತಗುಲಿ ಉಪ್ಪಿನಂಗಡಿ ಮೂಲದ ಆಟೋ ಚಾಲಕ ಸೇರಿದಂತೆ ಇಬ್ಬರು ಸಾವು

- Advertisement -
- Advertisement -

ಮಂಗಳೂರು; ವಿದ್ಯುತ್ ತಂತಿ ತಗುಲಿ ಉಪ್ಪಿನಂಗಡಿ ಮೂಲದ ಆಟೋ ಚಾಲಕ ಸೇರಿದಂತೆ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ಮಂಗಳೂರಿನ ರೊಸಾರಿಯೊ ಶಾಲೆಯ ಬಳಿ ನಡೆದಿದೆ.

ರಾಜು ಮತ್ತು ದೇವರಾಜು ಮೃತ ಚಾಲಕರು. ಒಬ್ಬರು ಉಪ್ಪಿನಂಗಡಿ ಹಾಗೂ ಇನ್ನೊಬ್ಬರು ಸಕಲೇಶಪುರದವರು ಎನ್ನಲಾಗಿದೆ. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.

ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ಇನ್ನೊಬ್ಬ ಚಾಲಕ ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಅವರೂ ವಿದ್ಯುತ್ ಶಾಕ್ ಗೆ ಒಳಗಾಗಿ ಸಾವನ್ನಪ್ಪಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹಗಳನ್ನು ವೆನ್ಲಾಕ್‌ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

- Advertisement -

Latest News

error: Content is protected !!