Saturday, June 6, 2026
Homeಕರಾವಳಿಉಡುಪಿಉಡುಪಿ: ತಡರಾತ್ರಿ ಹೊತ್ತಿ‌ ಉರಿದ ರಸ್ತೆ ಬದಿ ನಿಲ್ಲಿಸಿದ್ದ ಕಾರು

ಉಡುಪಿ: ತಡರಾತ್ರಿ ಹೊತ್ತಿ‌ ಉರಿದ ರಸ್ತೆ ಬದಿ ನಿಲ್ಲಿಸಿದ್ದ ಕಾರು

- Advertisement -
- Advertisement -

ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ಕಾರು ಹೊತ್ತಿ ಉರಿದಿರುವ ಘಟನೆ ಮಣಿಪಾಲದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ನಡೆದಿದ್ದು, ರಿಟ್ಜ್ ಕಾರು ಬೆಂಕಿಗಾಹುತಿಯಾಗಿದೆ.

ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಕಾರಿನ ಬಾನೆಟ್ ನಲ್ಲಿ ಹೊಗೆ ಬರುತ್ತಿರುವುದನ್ನು ನೋಡಿ ಕಾರು ಚಾಲಕ ಹೊರಗೆ ಬಂದಿದ್ದು, ಮರುಕ್ಷಣದಲ್ಲೇ ಬೆಂಕಿ ಹೊತ್ತಿಕೊಂಡಿದೆ.

ಅಗ್ನಿಶಾಮಕ ದಳ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದರೂ, ಬೆಂಕಿಯಿಂದ ಕಾರು ಸಂಪೂರ್ಣ ಸುಟ್ಟು ಹೋಗಿದೆ.

- Advertisement -

Latest News

error: Content is protected !!