Wednesday, June 3, 2026
Homeಕರಾವಳಿಉಡುಪಿಉಡುಪಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ; ಮಕ್ಕಳು ಸಾವು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಉಡುಪಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ; ಮಕ್ಕಳು ಸಾವು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

- Advertisement -
- Advertisement -

ಉಡುಪಿ: ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.

ಕೆರಾಡಿ ಗ್ರಾಮದ ಬೆಳ್ಳಾಲ ಸಮೀಪದ ನಂದ್ರೋಳ್ಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಧನರಾಜ್ (13) ಮತ್ತು ಛಾಯಾ (7) ಮೃತಪಟ್ಟಿದ್ದು, ತಾಯಿ ಶೀಲಾ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ‌ದಾಖಲಿಸಲಾಗಿದೆ.

ಗಂಭೀರ ಸ್ಥಿತಿಯಲ್ಲಿರುವ ತಾಯಿ ಶೀಲಾ ಅವರಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದ್ದು, ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Latest News

error: Content is protected !!