Friday, June 5, 2026
Homeಕರಾವಳಿಹಿರಿಯ ಸಾಹಿತಿ, ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎನ್.ಜಿ ಪಟವರ್ಧನ್ ವಿಧಿವಶ

ಹಿರಿಯ ಸಾಹಿತಿ, ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎನ್.ಜಿ ಪಟವರ್ಧನ್ ವಿಧಿವಶ

- Advertisement -
- Advertisement -

ಬೆಳ್ತಂಗಡಿ; ಹಿರಿಯ ಸಾಹಿತಿ, ಉಜಿರೆ ಎಸ್ ಡಿ ಎಂ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ. ಎನ್ ಜಿ ಪಟವರ್ಧನ್ ಅವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜು.1 ರಂದು ಕೊನೆಯುಸಿರೆಳೆದಿದ್ದಾರೆ.

ಅವರ ಮೂಲ ಮನೆ ಮುಂಡಾಜೆ ಗ್ರಾಮದ ಮೂಲಾರು ಎಂಬಲ್ಲಿದ್ದು, ಕಳೆದ ಅನೇಕ ವರ್ಷಗಳಿಂದ ಉಜಿರೆಯಲ್ಲಿ ನೆಲೆಸಿದ್ದರು.
ಚಿತ್ಪಾವನ ಸಮಾಜದ ಹಿರಿಯರೂ ಆಗಿದ್ದ ಅವರು ಹಲವು ಕಥೆ, ಕವನ, ವಿಮರ್ಷೆ ರಚನಾಕರ್ತರಾಗಿದ್ದರು‌. ಅವರು ಹಲವಾರು ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದರು. ಉತ್ತಮ ಶೋತೃ ಹಾಗೂ ಸಾಹಿತ್ಯ ವಿಷಯಾಸಕ್ತಿ ಹೊಂದಿದ್ದ ಅವರು ಹಲವಾರು ಯುವ ಬರಹಗಾರರ ಬರಹಗಳ ಬಗ್ಗೆ ವಿಮರ್ಶೆ ಬರೆದು ಆ ಮೂಲಕ ಅವರನ್ನು ಪ್ರೋತ್ಸಾಹಿಸುತ್ತಿದ್ದರು.

ಬೆಳ್ತಂಗಡಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ತಾಲೂಕು ಮಟ್ಟದ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು. ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ದೀರ್ಘ ವರ್ಷ ಅಂಕಣಗಳನ್ನೂ ಪ್ರಕಟಿಸುತ್ತಿದ್ದರು.

- Advertisement -

Latest News

error: Content is protected !!