Saturday, June 6, 2026
Homeಕರಾವಳಿಮಂಗಳೂರು; ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಮಂಗಳೂರು; ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ಮಂಗಳೂರು; ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ಹರೇಕಳದಲ್ಲಿ ನಡೆದಿದೆ. ಗಣೇಶ್ ಆಚಾರ್ಯ ( 27) ಮೃತ ಯುವಕ.

ಜೂನ್ 28 ರಂದು ಗಣೇಶ್ ಬೆಳಗ್ಗೆ ಸ್ಕೂಟರ್ ನಲ್ಲಿ ಸಾಗುತ್ತಿದ್ದಾಗ ಹರೇಕಳ ಕಡೆಯಿಂದ ಕೊಣಾಜೆ ಮಾರ್ಗವಾಗಿ ಹೋಗುವ ಸಂದರ್ಭ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಗಣೇಶ್ ಗಂಭೀರ ಗಾಯಗೊಂಡಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.  
ಟಿಪ್ಪರ್ ಚಾಲ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಟಿಪ್ಪರ್ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನಲ್ಲಿ ಎಸಿ ಮೆಕ್ಯಾನಿಕ್ ಆಗಿ ದುಡಿಯುತ್ತಿದ್ದ ಗಣೇಶ್, ಮನೆಯ ಹಿರಿಯ ಪುತ್ರನಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!