Saturday, June 13, 2026
Homeತಾಜಾ ಸುದ್ದಿರಾಜ್ಯದ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

- Advertisement -
- Advertisement -

ಬೆಂಗಳೂರು : ಇಂದು ಆಟವಾಡೋ ಮಕ್ಕಳ ಕೈಯಲ್ಲೂ ಮೊಬೈಲ್ ಅನ್ನೋ ಕಾಲ. ಮೊಬೈಲ್ ನಿಂದ ಎಷ್ಟು ಅನುಕೂಲಗಳು ಇವೆಯೋ ಅಷ್ಟೇ ಅನಾನುಕೂಲಗಳೂ ಇವೆ. ಇವತ್ತು ಮೊಬೈಲ್ ನಿಂದಾಗಿ ಹದಿಹರೆಯದ ಮಕ್ಕಳು ಹಾದಿ ತಪ್ಪಿರೋದು ಜಗತ್ತಿಗೆ ಗೊತ್ತಿರೋ ಸತ್ಯ. ಹೀಗಾಗಿ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಬೇಕು ಅನ್ನೋ ಆಗ್ರಹ ಬಹಳ ದಿನಗಳಿಂದ ಕೇಳಿ ಬಂದಿತ್ತು. ಉದೀಗ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸರ್ಕಾರ ಸಭೆ ನಡೆಸಿ ತೀರ್ಮಾನ ತೆಗೆದುಕೊಂಡಿದೆ.ಮೊಬೈಲ್ ನಿಂದಾಗಿ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಇದರೊಂದಿಗೆ ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸಭೆಯಲ್ಲಿ ಚರ್ಚೆಯಾಗಿ ಮಕ್ಕಳ ಕಲಿಕಾ ಸಮಯದ ರಕ್ಷಣೆಯ ಕ್ರಮವಾಗಿ ಮೊಬೈಲ್ ಉಪಯೋಗವನ್ನು ನಿಷೇದಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ಈ ಸಭೆಯಲ್ಲಿ ವ್ಯಕ್ತವಾಗಿರುತ್ತದೆ. ಆದ್ದರಿಂದ ಈ ಕೆಳಕಂಡಂತೆ ಆದೇಶಿಸಿದೆ.

ಹಾಗಾದರೆ ಸರ್ಕಾರದ ಆದೇಶದಲ್ಲಿ ಏನಿದೆ?

ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ. ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು. ಈ ನಿಷೇದವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಜವಾಬ್ದಾರಿ/ಅಧಿಕಾರ ವ್ಯಾಪ್ತಿ ನಿಗofಪಡಿಸಿದೆ.

- Advertisement -

Latest News

error: Content is protected !!