Monday, June 15, 2026
Homeಅಪರಾಧಹಾಸನ ಪೆನ್ ಡ್ರೈವ್ ಪ್ರಕರಣ; 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌..!

ಹಾಸನ ಪೆನ್ ಡ್ರೈವ್ ಪ್ರಕರಣ; 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌..!

- Advertisement -
- Advertisement -

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಪ್ರಕರಣವು ಬಗೆದಷ್ಟು ಆಳಕ್ಕೆ ಹೋಗುತ್ತಿದ್ದು, ಪ್ರತೀ 4 ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆಗೆ ಒಳಪಡುತ್ತಿದ್ದರು ಎಂಬ ಶಾಕಿಂಗ್ ಸಂಗತಿ ತನಿಖೆಯಿಂದ ಹೊರಬಿದ್ದಿದೆ ಎನ್ನಲಾಗಿದೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಿಗೆ ಈ ಅಂಶವು, ಪ್ರಜ್ವಲ್‌ ಹಲವು ಮಹಿಳೆಯರ ಜತೆಗೆ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಆರೋಪಕ್ಕೆ ಪುಷ್ಟಿ ನೀಡುವಂತಿದೆ.

ಈ ಸಂಬಂಧ ಕೆಲವೊಂದು ತಾಂತ್ರಿಕ ಸಾಕ್ಷ್ಯದ ಜಾಡು ಹಿಡಿದು ಹೋದಾಗ ಪ್ರಜ್ವಲ್‌ 4 ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆ ನಡೆಸುತ್ತಿದ್ದ ಸಂಗತಿ ಕಂಡು ಬಂದಿದೆ. ಇನ್ನು ಪ್ರಜ್ವಲ್‌ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾತ್ರ ಎಸ್‌ಐಟಿಯು ತನಿಖೆ ನಡೆಸುತ್ತಿದ್ದು ಈ ವೇಳೆ ಇಂತಹ ಕೆಲವು ಸಂಗತಿಗಳು ತನಿಖಾಧಿಕಾರಿಗಳ ಗಮನಕ್ಕೆ ಬಂದಿವೆ ಎನ್ನಲಾಗಿದೆ. ಮತ್ತೊಂದೆಡೆ ಕೆಲವು ಮಹಿಳೆಯರು ತಮ್ಮ ವೈಯಕ್ತಿಕ ಕೆಲಸ ಮಾಡಿಸಿಕೊಳ್ಳಲು, ವಿವಿಧ ಆಮಿಷಕ್ಕೊಳಗಾಗಿ ಪ್ರಜ್ವಲ್‌ ರೇವಣ್ಣ ಜತೆಗೆ ಆತ್ಮೀಯವಾಗಿದ್ದರು. ಪ್ರಜ್ವಲ್‌ ತಾವು ಕೊಟ್ಟ ಮಾತಿನಂತೆ ಅವರಿಗೆ ಕೆಲವು ಸವಲತ್ತುಗಳನ್ನು ಕಲ್ಪಿಸಿಕೊಟ್ಟಿರುವ ಆರೋಪವೂ ಕೇಳಿ ಬಂದಿದೆ.

ಇನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಪ್ರಜ್ವಲ್‌ ರೇವಣ್ಣ ವಿಶೇಷ ಸೌಲಭ್ಯಗಳಿಲ್ಲದೆ ಸಾಮಾನ್ಯ ಕೈದಿಯಂತೆಯಿದ್ದು, ಈ ನಡುವೆ ಸೋಮವಾರ ತಾಯಿ ಭವಾನಿ ರೇವಣ್ಣ ಅವರನ್ನು ಭೇಟಿಯಾದ ಬಳಿಕ ಕೊಂಚ ಸಪ್ಪೆಯಾಗಿದ್ದು ಮೌನಕ್ಕೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!