Friday, June 5, 2026
Homeತಾಜಾ ಸುದ್ದಿಡಾ.ಸೂರಜ್ ರೇವಣ್ಣ ಅರೆಸ್ಟ್ ಪ್ರಕರಣ; ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಡಾ.ಸೂರಜ್ ರೇವಣ್ಣ ಅರೆಸ್ಟ್ ಪ್ರಕರಣ; ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

- Advertisement -
- Advertisement -

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ  ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅರೆಸ್ಟ್ ಆಗಿದ್ದು, ಇಂದಿಗೆ ಅವರ ಸಿಐಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ಜುಲೈ.18ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ.  ಅಲ್ಲದೇ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.

ಇನ್ನೂ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು, ಸಿಐಡಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ನಾಳೆಗೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.

ಅಂದಹಾಗೇ ಜೂನ್.22, 2024ರಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅರಕಲಗೂಡು ಮೂಲದ ಯುವಕನೋರ್ವ ಹಾಸನದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದೂರು ನೀಡಿದ್ದನು.ಅಲ್ಲದೇ ಅವರ ಆಪ್ತ ಶಿವಕುಮಾರ್ ಎಂಬಾತನೂ ಸೂರಜ್ ವಿರುದ್ಧ ದೂರು ನೀಡಿದ್ದ. ಆ ಬಳಿಕ ಜೂನ್.23ರಂದು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಿತ್ತು.

- Advertisement -

Latest News

error: Content is protected !!