Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಗಡಾಯಿ ಕಲ್ಲು ಸೇರಿದಂತೆ ಫಾಲ್ಸ್ ಗಳಿಗೆ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

ಬೆಳ್ತಂಗಡಿ; ಗಡಾಯಿ ಕಲ್ಲು ಸೇರಿದಂತೆ ಫಾಲ್ಸ್ ಗಳಿಗೆ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

- Advertisement -
- Advertisement -

ಬೆಳ್ತಂಗಡಿ; ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು ಜಲಪಾತಗಳ ವೀಕ್ಷಣೆಗೆ ಹೆಚ್ಚಿನಿ ಪ್ರವಾಸಿಗರು ಬರುವ ಸಾಧ್ಯತೆ ಇದ್ದು ಪ್ರವಾಸಿಗರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕವಾಗಿ ಜಲಪಾತಗಳಿಗೆ ಹಾಗೂ ನರಸಿಂಹಗಡ (ಗಡಾಯಿಕಲ್ಲು) ಗೆ ಪ್ರವೇಶ ನಿರ್ಬಂಧಿಸಿ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ, ಕುದುರೆಮುಖ, ಸೋಮೇಶ್ವರ, ಆಗುಂಬೆ.ಸಿದ್ದಾಪುರ, ಕೊಲ್ಲೂರು ಕೆರೆಕಟ್ಟೆ ಮತ್ತು ಕಾರ್ಕಳ ಈ ವನ್ಯಜೀವಿ ವಲಯಗಳ ಅರಣ್ಯ ಪ್ರದೇಶಗಳಲ್ಲಿ ಬರುವ (ಅರಶಿನಗುಂಡಿ,ಕೂಡ್ಲು, ಬರ್ಕಳ, ಹಿಡ್ಡು ಮನೆ, ವನಕಬ್ಬಿ, ಬಂಡಾಜೆ ಜಲಪಾತಗಳಿಗೆ ಹಾಗೂ  ನರಸಿಂಹಗಡ-ಗಡಾಯಿಕಲ್ಲು, ಪ್ರದೇಶಗಳಿಗೆ ಪ್ರವೇಶ ನಿರ್ಬಂಧಿಸಲು ಅವರು ಸೂಚಿಸಿದ್ದಾರ . ಹಾಗೂ ಈ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ಮಾಡುವುದಲ್ಲದೇ ಸೂಚನಾ ಫಲಕ ಅಳವಡಿಸುವುದು, ಅಗತ್ಯ ಕಾವಲುಗಾರರನ್ನು ನಿಯೋಜಿಸಿ ಪ್ರವೇಶ ನಿರ್ಬಂಧಿ ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿದ್ದಾರೆ.

- Advertisement -

Latest News

error: Content is protected !!