Saturday, August 29, 2026
Homeಕರಾವಳಿಉಡುಪಿಗಾಳಿ, ಮಳೆಯಿಂದಾದ ಹಾನಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

ಗಾಳಿ, ಮಳೆಯಿಂದಾದ ಹಾನಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

- Advertisement -
- Advertisement -

ಉಡುಪಿ ಜಿಲ್ಲೆಯಾದ್ಯಂತ ಗಾಳಿ ಮತ್ತು ಮಳೆಯಿಂದಾದ ಹಾನಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಂಗಳೂರಿನಲ್ಲಿದ್ದು, ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಅವರು ಉಡುಪಿಯ ಸದ್ಯದ ಪರಿಸ್ಥಿತಿಯ ಕುರಿತು ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಚರ್ಚಿಸಿದರು. ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿ, ಪರಿಹಾರಕ್ಕೆ ಕ್ರಮ ಕೈಗಳ್ಳುವಂತೆ ತಿಳಿಸಿದರು.

ಜಿಲ್ಲೆಯ ಅಮಾವಾಸ್ಯೆ ಬಯಲು ಸೇರಿದಂತೆ ಕೆಲವೆಡೆ ಮಳೆ, ಗಾಳಿಯಿಂದ ಉಂಟಾಗಿರುವ ಹಾನಿಯ ಮಾಹಿತಿ ಪಡೆದು,ಜನರಿಗೂ ಕೂಡ ಈ ಕುರಿತು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.

- Advertisement -

Latest News

error: Content is protected !!