Wednesday, June 24, 2026
Homeಚಿಕ್ಕಮಗಳೂರುದೇವರಮನೆಯಲ್ಲಿ ಪ್ರವಾಸಿಗರ ಮೋಜು-ಮಸ್ತಿಗೆ ಕಡಿವಾಣ

ದೇವರಮನೆಯಲ್ಲಿ ಪ್ರವಾಸಿಗರ ಮೋಜು-ಮಸ್ತಿಗೆ ಕಡಿವಾಣ

- Advertisement -
- Advertisement -

ಕೊಟ್ಟಿಗೆಹಾರ: ಇಲ್ಲಿನ ಪ್ರವಾಸಿ ತಾಣ ದೇವರ ಮನೆಯಲ್ಲಿ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಗಸ್ತು ತಿರುಗಿ ಮೋಜು ಮಸ್ತಿ ಮಾಡುವ ಪ್ರವಾಸಿಗರಿಗೆ ದಂಡದ ಜೊತೆಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ದೇವರ ಮನೆಗೆ ಭೇಟಿ ನೀಡಿದ್ದ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ, ’ದೇವರಮನೆ ತಾಣ ಭಕ್ತಿಯ ತಾಣವಾಗಿದ್ದು ಇಲ್ಲಿ ಶ್ರೀ ಕಾಲಭೈರವೇಶ್ವರ ದೇವಸ್ಥಾನವಿದೆ. ಇಲ್ಲಿ ನಿತ್ಯ ಪ್ರವಾಸಿಗರು ಮೋಜು ಮಸ್ತಿ ಮಾಡಿ ಸಂಚಾರ ದಟ್ಟಣೆ ಮಾಡಿ ಜನರಿಗೆ ಕಿರಿಕಿರಿ ತರುವ ಸನ್ನಿವೇಶ ನಿರ್ಮಾಣವಾಗುತ್ತಿದೆ. ವಾರಾಂತ್ಯದಲ್ಲಿ ಅಲ್ಲದೇ ಈಗ ನಿತ್ಯದ ದಿನಗಳಲ್ಲೂ ಪ್ರವಾಸಿಗರು ಅದರಲ್ಲೂ ಯುವಕರು ಮದ್ಯಪಾನ ಮಾಡಿ ಕೂಗಾಡುವ ದೃಶ್ಯ ಕಂಡು ಬರುತ್ತಿದೆ. ಹಾಗಾಗಿ ಸೋಮವಾರ ಸಿಬ್ಬಂದಿಯೊಂದಿಗೆ ದೇವರಮನೆಗೆ ಭೇಟಿ ನೀಡಿ ಮದ್ಯಪಾನ ಮಾಡಿದ ಯುವಕರಿಗೆ ದಂಡ ವಿಧಿಸಿ ಎಚ್ಚರಿಸಲಾಗಿದೆ. ಪರಿಸರ ಕಲುಷಿತ ಮಾಡುವವರಿಗೆ ಕಡಿವಾಣ ಹಾಕಲಾಗುತ್ತಿದೆ. ಪ್ರವಾಸಿಗರು ದೇವಸ್ಥಾನಕ್ಕೆ ಭೇಟಿ ಕೊಟ್ಟು ಪರಿಸರ ಅಸ್ವಾಧನೆ ಮಾಡುವುದು ಒಳಿತು. ಹಾಗೆಂದು ಮೋಜು ಮಸ್ತಿಗೆ ಅವಕಾಶ ನೀಡುವುದಿಲ್ಲ. ಟ್ರಾಫಿಕ್ ಜಾಮ್ ಮಾಡಿ ಜನರಿಗೆ ತೊಂದರೆ ಕೊಡುವವರಿಗೆ ಶಿಸ್ತಿನ  ಕ್ರಮ ಕೈಗೊಳ್ಳುತ್ತೇವೆ’ ಎಂದರು.

ಈ ಸಂದರ್ಭದಲ್ಲಿ ಎಎಸ್ಐ ಟಿ.ಕೆ.ಶಶಿ, ಪೊಲೀಸ್ ಸಿಬ್ಬಂದಿಗಳಾದ ಅಶೋಕ್, ವರ್ಷಿಣಿ ಇದ್ದರು.

- Advertisement -

Latest News

error: Content is protected !!