Friday, June 27, 2025
Homeಅಪರಾಧಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ಐವರು ಯೋಧರು ಹುತಾತ್ಮ, ಹಲವರಿಗೆ ಗಾಯ

ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ಐವರು ಯೋಧರು ಹುತಾತ್ಮ, ಹಲವರಿಗೆ ಗಾಯ

spot_img
- Advertisement -
- Advertisement -

ಭಾರತೀಯ ಸೇನೆಯ ಸೇನಾ ವಾಹನದ ಮೇಲೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಮಚೇಡಿ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ಒಟ್ಟು 10 ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ದಾಳಿಯಲ್ಲಿ ನಾಲ್ವರು ಮೊದಲು ಸಾವಿಗೀಡಾಗಿದ್ದರು. ತೀವ್ರ ಗಾಯಗೊಂಡಿದ್ದ ಮತ್ತೊಬ್ಬ ಸೇನಾ ಸಿಬ್ಬಂದಿ ಆಸ್ಪತ್ರೆಯಲ್ಲಿ ಅಸುನೀಗಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿದೆ. ಒ‌ಟ್ಟಾಗಿ 6 ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮವು ಕಥುವಾ ಪಟ್ಟಣದಿಂದ ಸುಮಾರು 150 ಕಿಲೋಮೀಟರ್ ದೂರದಲ್ಲಿದೆ. ಕೆಲ ಸೇನಾ ವಾಹನಗಳು ಪ್ರತೀದಿನ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದವು ಎಂದು ಹೇಳಲಾಗಿದೆ.

ಉಗ್ರರು ಕತುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಜು.8 ಸೋಮವಾರದಂದು ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಈ ವೇಳೆ ನಮ್ಮ ಸೈನಿಕರು ಸಹ ಪ್ರತಿದಾಳಿ ನಡೆಸಿದ್ದರು. ಇನ್ನು ಈ ಪ್ರದೇಶವು ಭಾರತೀಯ ಸೇನೆಯ ಕಾರ್ಪ್ಸ್‌ ಅಡಿಯಲ್ಲಿ ಬರುತ್ತದೆ. ಕಳೆದ 2 ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ 2ನೇ ದಾಳಿಯಾಗಿದೆ. ಜೊತೆಗೆ ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ 2ನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 6 ಭಯೋತ್ಪಾದಕರು ಮೃತಪಟ್ಟಿದ್ದರು.  

ಉಗ್ರರು ಮೊದಲೇ ಸೇನೆಯ ವಾಹನ ತೆರಳುವ ಕುರಿತು ಮಾಹಿತಿ ಪಡೆದಿದ್ದು, ದಾಳಿಗೆ ಯೋಜನೆ ರೂಪಿಸಿದ್ದರು. ಇನ್ನು ಇಬ್ಬರು ಮೂವರು ಯೋಧರು ಸಮೀಪದ ಅರಣ್ಯ ಪ್ರದೇಶದಲ್ಲಿ ಶಂಕೆ ವ್ಯಕ್ತವಾಗಿದ್ದು, ಉಗ್ರರ ಶೋಧ ಕಾರ್ಯಕ್ಕಾಗಿ ಹೆಚ್ಚಿನ ಸೈನಿಕರನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

- Advertisement -
spot_img

Latest News

error: Content is protected !!