Thursday, June 4, 2026
Homeಕರಾವಳಿಉಡುಪಿಉಡುಪಿ; ಸಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ; ಸಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಉಡುಪಿ; ಸಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದ ಹೆರ್ಗಾ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಮಹೇಶ್ ಎಂಬವರ ಮಗಳು ಶ್ರೀನಿಧಿ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಶ್ರೀನಿಧಿ, ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾಡಿಗೆ ಮನೆಯ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!