- Advertisement -
![]()
- Advertisement -
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರ ಕೇಸ್. ಹೀಗಾಗಿ ಜಾಮೀನು ನೀಡೋದಕ್ಕೆ ಸಾಧ್ಯವಿಲ್ಲ ಅಂತ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಸೂರಜ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಮೂರ್ತಿ ಕೆಎನ್ ಶಿವಕುಮಾರ್ ಅವರು ನಡೆಸಿದರು. ಈ ವೇಳೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದ ವಿಚಾರವಾಗಿದೆ ಅಂತ ಅಭಿಪ್ರಾಯ ಪಟ್ಟು, ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
- Advertisement -


