Sunday, June 29, 2025
Homeತಾಜಾ ಸುದ್ದಿರಾಹುಲ್ ಗಾಂಧಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ; ಶಾಸಕ ಡಾ.ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ರಾಹುಲ್ ಗಾಂಧಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ; ಶಾಸಕ ಡಾ.ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

spot_img
- Advertisement -
- Advertisement -

ಮಂಗಳೂರಿನಲ್ಲಿ  ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಬಗ್ಗೆ  ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಡಾ.ಭರತ್ ಶೆಟ್ಟಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ರಾಹುಲ್ ಗಾಂಧಿ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಕ್ಕಾಗಿ ಜುಲೈ 8ರಂದು ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಭರತ್ ಶೆಟ್ಟಿ ವಿರುದ್ಧ ಎಫ್ ಐ ಆರ್  ದಾಖಲಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ನೀಡಿದೆ.

- Advertisement -
spot_img

Latest News

error: Content is protected !!