Sunday, June 7, 2026
Homeತಾಜಾ ಸುದ್ದಿಮಾಜಿ ಸಚಿವ ಬಿ.ನಾಗೇಂದ್ರರನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು

ಮಾಜಿ ಸಚಿವ ಬಿ.ನಾಗೇಂದ್ರರನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು

- Advertisement -
- Advertisement -

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ಮೊನ್ನೆ ದಾಳಿ ನಡೆಸಿದ್ದರು. ಅಲ್ಲದೇ ನಾಗೇಂದ್ರ ಅವರ ಆಪ್ತನನ್ನು ವಶಕ್ಕೆ ಪಡೆದಿದ್ದರು. ಇನ್ನು ದಾಳಿ ವೇಳೆ ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳನ್ನು ಹಗರಣದಲ್ಲಿ ಬಂದ ಹಣದಿಂದಲೇ ಖರೀದಿಸಲಾಗಿದ್ಯಾ ಅನ್ನೋ ಬಗ್ಗೆ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.

ಇದರ ನಡುವೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪಿಎ ಹರೀಶ್ ಅವರ ವೀಡಿಯೋ ಆಧಾರಿತ ಹೇಳಿಕೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಪಿಎ ಹರೀಶ್ ನೀಡಿದಂತ ಹೇಳಿಕೆಯ ಆಧಾರದ ಮೇಲೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!