Tuesday, June 9, 2026
Homeತಾಜಾ ಸುದ್ದಿನಟಿ, ನಿರೂಪಕಿ ಅಪರ್ಣಾ ನಿಧನಕ್ಕೆ ನಮ್ಮ ಮೆಟ್ರೋ ಸಂತಾಪ

ನಟಿ, ನಿರೂಪಕಿ ಅಪರ್ಣಾ ನಿಧನಕ್ಕೆ ನಮ್ಮ ಮೆಟ್ರೋ ಸಂತಾಪ

- Advertisement -
- Advertisement -

ಬೆಂಗಳೂರು : ನಟಿ, ನಿರೂಪಕಿ ಅಪರ್ಣಾ ನಿಧನಕ್ಕೆ ನಮ್ಮ ಮೆಟ್ರೋ ಸಂತಾಪ ಸೂಚಿಸಿದೆ.ಅಪರ್ಣಾ ಅವರ ಕನ್ನಡ ಭಾಷೆಯ ಮೇಲಿನ ಅವರ ಹಿಡಿತ ಮತ್ತು ಉಚ್ಚಾರಣೆ ಎರಡೂ ಮಂತ್ರಮುಗ್ಧಗೊಳಿಸುತ್ತಿದ್ದವು. ನಮ್ಮ ಮೆಟ್ರೋ ರೈಲುಗಳಲ್ಲಿ ಅವರ ಧ್ವನಿ ಎಂದೆಂದಿಗೂ ಜೀವಂತವಾಗಿದೆ. ನಮ್ಮ ಮುಂದಿನ ಎಲ್ಲಾ ಪ್ರಯತ್ನಗಳಲ್ಲಿ ನಮ್ಮ ಮೆಟ್ರೋ ಅವಳನ್ನು ಮಿಸ್ ಮಾಡಿಕೊಳ್ಳುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಮ್ಮ ಮೆಟ್ರೋ ತಿಳಿಸಿದೆ.

ನಿರೂಪಕಿ ಅಪರ್ಣಾ ಅವರು ಕಳೆದ 13 ವರ್ಷಗಳಿಂದ ನಮ್ಮ ಮೆಟ್ರೋಗೆ ಧ್ವನಿ ನೀಡಿದ್ದಾರೆ. ಮೊದಲ ಬಾರಿಗೆ 2011ರ ಅಕ್ಟೋಬರ್ 20 ರಂದು ಎಂಜಿ ರೋಡ್​ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಆರಂಭಿಸಿದಾಗಿನಿಂದ ಇತ್ತೀಚೆಗೆ 2023ರ ಅಕ್ಟೋಬರ್​ 9 ರಂದು ಉದ್ಘಾಟನೆಗೊಂಡ ಕೆಂಗೇರಿಯಿಂದ ಚಲ್ಲಘಟ್ಟ, ಕೆ.ಆರ್ ಪುರನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ರೈಲು ಮತ್ತು ನಿಲ್ದಾಣಗಳಲ್ಲಿ ನಟಿ ಅಪರ್ಣಾ ವಾಯ್ಸ್ ನೀಡಿದ್ದರು.

- Advertisement -

Latest News

error: Content is protected !!