ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಂದು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ನಾಗೇಂದ್ರ ವಾಲ್ಮೀಕಿ ಹಗರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದಿದ್ದಾರೆ.
ಮನೆಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ಮಾಡಿದ್ರು ಇಂದು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿಸಿದ್ದಾರೆ.ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ಮೊನ್ನೆ ದಾಳಿ ನಡೆಸಿದ್ದರು ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳನ್ನು ಹಗರಣದಲ್ಲಿ ಬಂದ ಹಣದಿಂದಲೇ ಖರೀದಿಸಲಾಗಿದ್ಯಾ ಅನ್ನೋ ಬಗ್ಗೆ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.


