- Advertisement -
![]()
- Advertisement -
ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ನಡೆದಿದೆ.
ಇಲ್ಲಿನ ವನಿತಾ ಅವರ ಮನೆಗೆ ನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ಕದ್ದೊಯ್ದಿದ್ದಾರೆ. ಮನೆ ಮಂದಿ ಕೆಲಸಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಮನೆ ಬಾಗಿಲಿನ ಬೀಗ ಮುರಿದಿರೋದು ನೋಡಿ ವನಿತಾ ಅವರ ಅಕ್ಕ ಸುಜಾತ ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಮನೆಯವರು ಬಂದು ಒಳಗೆ ಹೋಗಿ ನೋಡಿದಾಗ ಕೋಣೆಯಲ್ಲಿದ್ದ ಕಪಾಟಿನಲ್ಲಿ ತಡಕಾಡಿ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಚಿನ್ನಾಭರಣ ದೋಚಿದ್ದು ಗೊತ್ತಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -


