Saturday, June 6, 2026
Homeಕರಾವಳಿಮಂಗಳೂರುರಾಹುಲ್ ಗಾಂಧಿಗೆ ಶಿಕ್ಷೆ ನೀಡುವಂತೆ ಪೊಳಲಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ನಿಂದ ಪ್ರಾರ್ಥನೆ

ರಾಹುಲ್ ಗಾಂಧಿಗೆ ಶಿಕ್ಷೆ ನೀಡುವಂತೆ ಪೊಳಲಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ನಿಂದ ಪ್ರಾರ್ಥನೆ

- Advertisement -
- Advertisement -

ಬಂಟ್ವಾಳ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದುತ್ವದ ಕುರಿತು ಅವಹೇಳನಕಾರಿ ಮಾತನಾಡಿದ್ದಕ್ಕೆ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಕೆಯಾಗಿದೆ.

ಬಂಟ್ವಾಳ‌ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಗಿದೆ.

ಧರ್ಮವಿರೋಧಿ ಹೇಳಿಕೆ ನೀಡಿ ರಾಷ್ಟ್ರೀಯತೆಗೆ ಅವಮಾನ ಮಾಡಿದ ಆರೋಪವನ್ನು ಮಾಡಲಾಗಿದ್ದು, ರಾಹುಲ್ ಗಾಂಧಿಗೆ ಒಳ್ಳೆಯ ಬುದ್ದಿ ಕೊಟ್ಟು, ಹಿಂದುತ್ವದ ಕುರಿತಾದ ಹೇಳಿಕೆಗೆ ಶಿಕ್ಷೆ ನೀಡುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ.

ಕಳೆದ ಲೋಕಸಭಾ ಅಧಿವೇಶನದಲ್ಲಿ ಭಾಷಣ ಮಾಡಿದ್ದ ವೇಳೆ ಹಿಂದುತ್ವದ ಕುರಿತಾಗಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು.

- Advertisement -

Latest News

error: Content is protected !!