Thursday, June 4, 2026
Homeಕರಾವಳಿಮಂಗಳೂರುಮಂಗಳೂರು: ಮೀನು ‌ಸಂಸ್ಕರಣಾ ಘಟಕದಲ್ಲಿ ಅಗ್ನಿ‌ ಅನಾಹುತ

ಮಂಗಳೂರು: ಮೀನು ‌ಸಂಸ್ಕರಣಾ ಘಟಕದಲ್ಲಿ ಅಗ್ನಿ‌ ಅನಾಹುತ

- Advertisement -
- Advertisement -

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೀನು ಸಂಸ್ಕರಣಾ ಘಟಕವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.‌

ಮಂಗಳೂರು ಹೊರ ವಲಯದ ಸುರತ್ಕಲ್‌ನಲ್ಲಿ ಅಗ್ನಿ ಅವಘಡ ನಡೆದಿದ್ದು, ಅಥೆಂಟಿಕ್ ಓಷಿಯನ್ ಟ್ರೆಷರ್ ಮೀನು ಸಂಸ್ಕರಣಾ ಘಟಕದಲ್ಲಿ ಹಾನಿ‌ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

ಬೆಂಕಿ ಅನಾಹುತದಿಂದಾಗಿ‌ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ ಎಂದು ಹೇಳಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ‌.

- Advertisement -

Latest News

error: Content is protected !!