- Advertisement -
![]()
- Advertisement -
ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿಯ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಮಾಜಿ ಶಾಸಕ ಪ್ರಭಾಕರ ಬಂಗೇರ ಸೋಮಣ್ಣ ಅವರನ್ನು ಅಭಿನಂದಿಸಿದರು. ಬೆಳ್ತಂಗಡಿ ಮಂಡಲದ ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಇಂದು ವಿ. ಸೋಮಣ್ಣ ಬೆಳ್ತಂಗಡಿಗೆ ಆಗಮಿಸಿದ್ದರು. ಇದಕ್ಕೂ ಮುನ್ನ ಮಂಗಳೂರಿನಲ್ಲಿ ಇಂದು ಬೆಳಗ್ಗೆ ರೈಲ್ವೇ ನಿಲ್ದಾಣಗಳಿಗೆ ಭೇಟಿ ನೀಡಿದ್ದ ಸಚಿವ ಸೋಮಣ್ಣ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರೈಲ್ವೇ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದರು.
- Advertisement -


