Wednesday, June 3, 2026
Homeತಾಜಾ ಸುದ್ದಿಕನ್ನಡಿಗರಿಗೆ ಮೀಸಲಾತಿ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆ ಹಿಡಿದ ರಾಜ್ಯ ಸರ್ಕಾರ

ಕನ್ನಡಿಗರಿಗೆ ಮೀಸಲಾತಿ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆ ಹಿಡಿದ ರಾಜ್ಯ ಸರ್ಕಾರ

- Advertisement -
- Advertisement -

ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಸಚಿವ ಸಂಪುಟದಲ್ಲಿ ಪರಾಮರ್ಶಿಸಿ ನಿರ್ಧರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಳೆದ ಸೋಮವಾರ ನಡೆದಿದ್ದ ಸಚಿವ ಸಂಪುಟದಲ್ಲಿ ವಿಧೇಯಕ ಮಂಡನೆಗೆ ಒಪ್ಪಿಗೆ ಪಡೆದಿದ್ದ ರಾಜ್ಯ ಸರ್ಕಾರ ಪ್ರಸ್ತುತ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ತೀರ್ಮಾನಿಸಿತ್ತು.

ರಾಜ್ಯ ಸರ್ಕಾರದ ನಿಲುವಿಗೆ ಖಾಸಗಿ ಕಂಪನಿಗಳಿಂದ ವಿರೋಧ ವ್ಯಕ್ತವಾದ ಕಾರಣ ಸದ್ಯಕ್ಕೆ ಕಾಯ್ದೆ ಜಾರಿಗೊಳಿಸುವ ನಿರ್ಧಾರದಿಂದ ಹಿಂದೆ ಸರಿದಿದೆ.

- Advertisement -

Latest News

error: Content is protected !!