Friday, June 5, 2026
Homeತಾಜಾ ಸುದ್ದಿರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿ ಗ್ಯಾಂಗ್ ಗೆ ಆಗಸ್ಟ್ 1ರವರೆಗೆ ಮತ್ತೆ ನ್ಯಾಯಾಂಗ ಬಂಧನ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿ ಗ್ಯಾಂಗ್ ಗೆ ಆಗಸ್ಟ್ 1ರವರೆಗೆ ಮತ್ತೆ ನ್ಯಾಯಾಂಗ ಬಂಧನ

- Advertisement -
- Advertisement -

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಹಾಗೂ ತುಮಕೂರು ಜೈಲಿನಲ್ಲಿರುವ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರ ಮುಂದೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಯಿತು. ಈ ವೇಳೆ   ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ಅಂದರೇ ಆಗಸ್ಟ್.1ರವರೆಗೆ ನ್ಯಾಯಾಂಗ ಬಂಧವನ್ನು ವಿಸ್ತರಿಸಿ ಆದೇಶಿಸಿ ನ್ಯಾಯಾಧೀಶರು ಆದೇಶವನ್ನು ಹೊರಡಿಸಿದ್ದಾರೆ. ಹಾಗಾಗಿ ಸದ್ಯಕ್ಕಂತೂ ಆರೋಪಿಗಳೇ ಜೈಲೇ ಗತಿ ಎಂಬಂತಾಗಿದೆ. ಇನ್ನು ದರ್ಶನ್ ರಿಟ್ ಅರ್ಜಿಯ ವಿಚಾರಣೆ ಕೂಡ ನಾಳೆಗೆ ಮುಂದೂಡಿಕೆಯಾಗಿದೆ.

- Advertisement -

Latest News

error: Content is protected !!