- Advertisement -
- Advertisement -
ಕೊಡಗು; ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ಮಧ್ಯೆ ಕರ್ತೋಜಿ ಬಳಿ ಕಿ.ಮೀ. 90.05 ರಿಂದ 90.10ರವರೆಗೆ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರೋದರಿಂದ ಸಾರ್ವಜನಿಕ ಹಿತಾಸಕ್ತಿಯಿಂದ ಈ ಭಾಗದಲ್ಲಿ ದಿನಾಂಕ 18.07.2024 ರಿಂದ 22.07.2024ರ ವರೆಗೆ ಪ್ರತಿ ದಿನ ರಾತ್ರಿ 8.00 ಗಂಟೆಯಿಂದ ಮರುದಿನ ಬೆಳಗ್ಗೆ 6.00 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ಮಧ್ಯೆ 4 ದಿನಗಳ ಕಾಲ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ತನಕ ವಾಹನ ಸಂಚಾರ ನಿಷೇಧ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಜಿಲ್ಲೆಯ ಮುಖಾಂತರ ಮೈಸೂರು, ಬೆಂಗಳೂರು ಮುಂತಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ ಎಂದು ಸೂಚಿಸಲಾಗಿದೆ.
- Advertisement -