ಬೆಳ್ತಂಗಡಿ; ಲಾರಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುಂಜಾಲಕಟ್ಟೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ಫರಂಗಿಪೇಟೆ ನಿವಾಸಿ ಕಾರ್ತಿಕ್ ಮೃತ ದುರ್ದೈವಿ.ಗಾಯಗೊಂಡವರ ಹೆಸರು, ಮಾಹಿತಿ ಲಭ್ಯವಾಗಿಲ್ಲ.
ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದಾಗ ಪುಂಜಾಲಕಟ್ಟೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಬಳಿಯ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.
ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಪಲ್ಟಿಯಾಗಿ ಲಾರಿ ಅಡಿಯಲ್ಲಿ ಸಿಲುಕಿಕೊಂಡಿದ್ದ ಯುವಕರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ. ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.