Saturday, June 6, 2026
Homeಕೊಡಗುಸದ್ಯಕ್ಕಂತೂ ನಿಲ್ಲಲ್ವಾ ಮಳೆಯ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಸದ್ಯಕ್ಕಂತೂ ನಿಲ್ಲಲ್ವಾ ಮಳೆಯ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ಬೆಂಗಳೂರು; ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಅಯ್ಯೋ ಸಾಕಪ್ಪಾ.. ನಿನ್ನ ಸಹವಾಸ ಅಂತಾ ಜನ ಹಿಡಿ ಶಾಪ ಹಾಕುವಂತೆ ಮಾಡಿದೆ. ಸಾಕಷ್ಟು ಅವಾಂತರಗಳಿಗೂ ಮನೆ ಕಾರಣವಾಗಿದೆ.

ಇನ್ನು ಇಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.ಅಲ್ಲದೇ ಹಾಸನಕ್ಕೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ.

 ಬೀದರ್‌, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.ಕೊಡಗು, ಧಾರವಾಡ, ಯಾದಗಿರಿ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ನಾಳೆಯಿಂದ ಮೂರು ದಿನಗಳವವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

- Advertisement -

Latest News

error: Content is protected !!