Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ;ಘಟನೆಯಲ್ಲಿ ಅದೃಷ್ಟವಶಾತ್ ಲಾರಿ ಚಾಲಕ ಪಾರು

ಬೆಳ್ತಂಗಡಿ : ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ;ಘಟನೆಯಲ್ಲಿ ಅದೃಷ್ಟವಶಾತ್ ಲಾರಿ ಚಾಲಕ ಪಾರು

- Advertisement -
- Advertisement -

ಬೆಳ್ತಂಗಡಿ : ಚಲಿಸುತ್ತಿದ್ದ ಲಾರಿ ಮೇಲೆ ಎರಡು ವಿದ್ಯುತ್ ಕಂಬ ಬಿದ್ದಿದ್ದು.ಈ ವೇಳೆ ಲಾರಿ ಚಾಲಕ ಪ್ರಾಣಾಪಾಯದಿಂದ ಬದುಕುಳಿದಿರುವ ಘಟನೆ ಬೆಳ್ತಂಗಡಿಯ ವರಕಬೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.24 ರಂದು (ಇಂದು) ಬೆಳಗ್ಗೆ ಮದಡ್ಕ‌‌ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ಎರಡು ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ.

ಲಾರಿ ಮೇಲೆ ವಿದ್ಯುತ್ ಕಂಬ ಬೀಳುವ ವೇಳೆ ಎರಡು ಬೈಕ್ ಸವಾರರು ಸ್ಕೀಡ್ ಅಗಿ ರಸ್ತೆಗೆ ಬಿದ್ದಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಬೈಕ್ ಸವಾರರಿಗೆ ಯಾವುದೇ ಗಾಯವಾಗಿಲ್ಲ. ಲಾರಿ ಮೇಲೆ ವಿದ್ಯುತ್‌ ಕಂಬ ಬಿದ್ದಿದ್ದರಿಂದ ಒಂದು ಗಂಟೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಯಿಂದ ಲಾರಿ ಚಾಲಕ ಅದೃಷ್ಟವಶಾತ್ ಪರಾಗಿರುವುದು ಮಾತ್ರ ಪವಾಡವೇ ಎನ್ನಲಾಗಿದೆ.

- Advertisement -

Latest News

error: Content is protected !!