Thursday, June 4, 2026
Homeಕೊಡಗುಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು; ಜಿಲ್ಲೆಯ ಹಲವೆಡೆ ಆತಂಕ ಸೃಷ್ಟಿ

ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು; ಜಿಲ್ಲೆಯ ಹಲವೆಡೆ ಆತಂಕ ಸೃಷ್ಟಿ

- Advertisement -
- Advertisement -

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯ ಜೇಡಿಗುಂಡಿ ಎಂಬಲ್ಲಿ ಬೃಹತ್ ಬರೆ ಕುಸಿದು ಬಿದ್ದಿದ್ದು, ಜಿಲ್ಲೆಯ ಬಹುತೇಕ ಕಡೆ ಎರಡು ದಿನಗಳಿಂದ ರಭಸವಾಗಿ ಗಾಳಿ ಬೀಸುತ್ತಿದ್ದು, ಬರೆಗಳು ಕುಸಿಯುತ್ತಿವೆ, ಮರಗಳು ಧರೆಗುರುಳುತ್ತಿವೆ. ವಿದ್ಯುತ್ ಕಂಬಗಳು ಬಿದ್ದು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇದೇ ಮಾರ್ಗದಿಂದ ಹಾದು ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಅಪಾಯದಿಂದ ಪಾರಾಗಿದೆ. ಮಣ್ಣು ಕುಸಿಯುತ್ತಿದ್ದಂತೆ ಚಾಲಕ ಬಸ್ ನ್ನು ನಿಲ್ಲಿಸಿದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ. ಒಂದು ಗಂಟೆಗೂ ಅಧಿಕ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸೋಮವಾರಪೇಟೆಯ ಹಾನಗಲ್ಲು ವ್ಯಾಪ್ತಿಯ ಕಲ್ಕಂದೂರು ಗ್ರಾಮದಲ್ಲಿ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಹಾನಿಯಾಗಿದೆ. ಪ್ರವೀಣ್ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಅದೃಷ್ಟವಶಾತ್ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮಡಿಕೇರಿ ತಾಲ್ಲೂಕಿನ ಕರಿಕೆ- ಭಾಗಮಂಡಲ ರಸ್ತೆಯಲ್ಲಿ ಬೃಹತ್ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ನಂತರ ತೆರವು ಕಾರ್ಯಾಚರಣೆ ನಡೆಯಿತು. ಕರಿಕೆಯ ಕುಂಡತ್ತಿಕಾನ ಗ್ರಾಮದಲ್ಲಿ ಕೆ.ಎಸ್.ಗಣೇಶ ಎಂಬುವವರ ಮನೆ ಮೇಲೆ ಅಡಿಕೆ ಮರ ಬಿದ್ದು ಹಾನಿಯಾಗಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಅನೇಕ ಕಡೆ ಮರಗಳು ಬೀಳುತ್ತಿವೆ. ಜಿಲ್ಲಾ ವ್ಯಾಪಿ ಗಾಳಿಯ ರಭಸಕ್ಕೆ ಆತಂಕ ಸೃಷ್ಟಿಯಾಗಿದೆ.

- Advertisement -

Latest News

error: Content is protected !!