- Advertisement -
![]()
- Advertisement -
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಮನೆಯೂಟ, ಮಲಗಲು ಹಾಸಿಗೆ, ಓದಲು ಪುಸ್ತಕ ನೀಡುವಂತೆ ಕೋರಿ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಈ ಹಿಂದೆ ಕೋರ್ಟ್ ನಡೆಸಿತ್ತು. ಅಲ್ಲದೇ ತೀರ್ಪನ್ನು ಜುಲೈ.25ರ ಇಂದಿಗೆ ಕಾಯ್ದಿರಿಸಿತ್ತು. ಆದರೆ ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಸಿ, ದರ್ಶನ್ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹಾಗಾಗಿ ದರ್ಶನ್ ಅವರಿಗೆ ಜೈಲೂಟವೇ ಫಿಕ್ಸ್ ಎಂಬಂತಾಗಿದೆ.
ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಆಗದೇ ಪರದಾಡುತ್ತಿದ್ದಾರೆ. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರು ಕೂಡ ಆಗಿತ್ತು. ಹೀಗಾಗಿ ದರ್ಶನ್ ಅವರಿಗೆ ಮನೆ ಊಟ ನೀಡಲು ಅವಕಾಶ ಕೊಡುವಂತೆ ಕೋರಿ ಅವರ ಪರ ವಕೀಲರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಜಾಗೊಂಡಿದೆ.
- Advertisement -


