Friday, September 11, 2026
HomeUncategorizedಸಂಪಾಜೆ: ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್

ಸಂಪಾಜೆ: ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್

- Advertisement -
- Advertisement -

ಸಂಪಾಜೆ: ಸುಳ್ಯ ತಾಲೂಕಿನ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗಳಿಗೂ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

21 ವರ್ಷದ ಯುವಕನಿಗೆ ಹಾಗೂ 30 ವರ್ಷದ ಮಹಿಳಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಸಂಪಾಜೆ ಆರೋಗ್ಯ ಕೇಂದ್ರದ ಕ್ವಾಟ್ರಸ್ ಹಾಗೂ ಸಂಪಾಜೆಯ ಕುಟ್ಟಾಳು ಸ್ಥಳವನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಿ, ಸೀಲ್ ಡೌನ್ ಮಾಡಲಾಗಿದೆ.

ಇಂದು ಬೆಳಿಗ್ಗೆ ಅಷ್ಟೇ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಸೇರಿ ಒಟ್ಟು ಆರು ಮಂದಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನಲೆಯಲ್ಲಿ ಈ ಪೈಕಿ ಓರ್ವರು ನೆಲೆಸಿರುವ ಪೆರಾಜೆಯ ಇಂದಿರಾ ಆವಾಝ್ ಕಾಲೊನಿಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!