Wednesday, June 3, 2026
Homeಕರಾವಳಿಮಂಗಳೂರುಕೊರಗಜ್ಜನಿಗೆ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಹರಕೆ ಕೋಲ ಸೇವೆ

ಕೊರಗಜ್ಜನಿಗೆ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಹರಕೆ ಕೋಲ ಸೇವೆ

- Advertisement -
- Advertisement -

ಮಂಗಳೂರು: ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಸಂಕಷ್ಟ ಪರಿಹಾರಕ್ಕಾಗಿ ಕೊರಗಜ್ಜನ ಮೊರೆ ಹೋಗಿದ್ದಾರೆ

ತೊಕ್ಕೊಟ್ಟು ಹಳೆ ಚೆಕ್ ಪೋಸ್ಟ್ ಸಮೀಪದಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಮಾಜಿ ಸಚಿವರೂ ಆಗಿರುವ ವಿನಯ ಕುಲಕರ್ಣಿ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ.

ಕೋಲದಲ್ಲಿ ಶಾಸಕ ವಿನಯ ಕುಲಕರ್ಣಿ ಮತ್ತು ಕುಟುಂಬಸ್ಥರು ಭಾಗಿಯಾಗಿದ್ದು, ವಿಧಾನಸಭೆ ಚುನಾವಣೆಗೂ ಮುನ್ನವೇ ಕುಲಕರ್ಣಿ ಸ್ನೇಹಿತರು ಕೊರಗಜ್ಜನ ಕೋಲದ ಬಗ್ಗೆ ಸಲಹೆ ನೀಡಿದ್ದರು ಎನ್ನಲಾಗಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಸಿಬಿಐ ಕೋರ್ಟ್ ‌ನಿರ್ಬಂಧ ವಿಧಿಸಿದೆ.

ಮುಂದಿನ ತಿಂಗಳು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಇದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿ ಕೊರಗಜ್ಜನ ಮೊರೆ ಹೋಗಿದ್ದಾರೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!