Wednesday, June 3, 2026
Homeತಾಜಾ ಸುದ್ದಿಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

- Advertisement -
- Advertisement -

ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ  ಬೆಂಗಳೂರಿನ 5ನೇ ACMM ಕೋರ್ಟಿನ ನ್ಯಾಯಾಧೀಶರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿಯಲ್ಲಿ ಮೊನ್ನೆ ಕಾಟನ್ ಪೇಟೆಯ ಪೊಲೀಸರು ಅವರನ್ನು ಬಂಧಿಸಿದ್ದರು. ಹಾಗಾಗಿ ಇಂದು ವಿಚಾರಣೆಗೆ NGV ಯಲ್ಲಿರುವ ಜಡ್ಜ್ ನಿವಾಸದಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಹಾಜರುಪಡಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಧೀಶರು ಸೋಮವಾರ ಜಾಮೀನು ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

 ಏನಿದು ಪ್ರಕರಣ?

ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಕುರಿ ಮಾಂಸದ ಬದಲು ನಾಯಿ ಮಾಂಸ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಸುದ್ದಿ ಬಂದ ಹಿನ್ನೆಲೆ ನಿನ್ನೆ ಹಿಂದೂ ಸಂಘಟನೆ ಕಾರ್ಯಕರ್ತರು ಜೈಪುರದಿಂದ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ದಾಳಿ ಮಾಡಿದ್ದರು.

ಎರಡು ಬಾಕ್ಸ್ ಗಳನ್ನು ತೆರೆದು ನೋಡಿದಾಗ ಅದರಲ್ಲಿ ಕುರಿ ಮಾಂಸದ ಬದಲು ನಾಯಿ ಮಾಂಸ ಪತ್ತೆಯಾಗಿತ್ತು. ಈ ವೇಳೆ ಮಾಂಸದ ವ್ಯಾಪಾರಿಗಳು ಹಾಗೂ ಹಿಂದೂ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಮಾಂಸ ವ್ಯಾಪಾರಿಗಳು ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವೇಳೆ ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಅವರನ್ನು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಿದ್ದರು.

- Advertisement -

Latest News

error: Content is protected !!