Sunday, June 7, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ; ಸಂಸದರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ; ಸಂಸದರಿಗೆ ಅಭಿನಂದನಾ ಕಾರ್ಯಕ್ರಮ

- Advertisement -
- Advertisement -

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಸ್ತೆ ಅಗಲೀಕರಣ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದೇ ವೇಳೆ ಇಂದು ಬಿಜೆಪಿ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಮತ್ತು ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮದಲ್ಲಿಯೂ ಸಂಸದ ಬ್ರಿಜೇಶ್ ಚೌಟ ಭಾಗವಹಿಸಿದ್ದರು.

ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಅಭ್ಯುದಯ ಸಂಘ, ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ (ರಿ.) ಮತ್ತು ಕುಲಾಲ – ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ವತಿಯಿಂದಲೂ ಸಂಸದರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು

- Advertisement -

Latest News

error: Content is protected !!