- Advertisement -
![]()
- Advertisement -
ಕಾರ್ಕಳ; ಟಿಪ್ಪರ್ ಮತ್ತು ಬೈಕ್ ಡಿಕ್ಕಿ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ಪುಲ್ಕೇರಿ ಬಳಿ ನಡೆದಿದೆ. ಬೈಪಾಸ್ ನಿವಾಸಿ, ಕಾರ್ ಮೆಕ್ಯಾನಿಕ್ ನಿಜಾಂ (21) ಮೃತ ಯುವಕ.
ಕಾರ್ಕಳದಿಂದ ಬೈಪಾಸ್ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಬೈಪಾಸ್ ನಿಂದ ಕಾರ್ಕಳದತ್ತ ಬರುತ್ತಿದ್ದ ನಿಜಾಂ ಚಲಾಯಿಸುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ನಿಜಾಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತದೇಹ ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿದ್ದು ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಮೃತ ನಿಜಾಂ ತಂದೆ ಇಮ್ತಿಯಾಜ್, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.
- Advertisement -


