Sunday, June 7, 2026
Homeಕರಾವಳಿಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ; ಕಿಲೋ ಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತಿರುವ...

ಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ; ಕಿಲೋ ಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತಿರುವ ವಾಹನಗಳು

- Advertisement -
- Advertisement -

ಹಾಸನ; ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇನ್ನು ಕಿಲೋ ಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ.

ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಗಂಟೆಗಟ್ಟಲೆ ಕಿಲೋಮೀಟರ್​ ತನಕ ವಾಹನಗಳು ಸಾಲುಗಟ್ಟಿ ನಿಂತಿದೆ.

ಸಂಚಾರ ದಟ್ಟಣೆ ಆಗುವ ಹಿನ್ನೆಲೆ ಕೆಲಹೊತ್ತು ಸಕಲೇಶಪುರ ಹಾದಿಯಲ್ಲಿ ವಾಹನ ಸವಾರರು ಸಂಚರಿಸಬಾರದೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮನವಿಮಾಡಿದ್ದಾರೆ. ಗಂಟೆಗಟ್ಟಲೆ ಸಾಲು ನಿಂತ ವಾಹನಳಿಂದ ರೋಡ್ ಬ್ಲಾಕ್ ಆಗಿದ್ದು ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು ಮಣ್ಣು ತೆರವು ಮಾಡುವ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.

- Advertisement -

Latest News

error: Content is protected !!