Wednesday, June 24, 2026
Homeತಾಜಾ ಸುದ್ದಿಅಕ್ಷರಶಃ ನರಕವಾದ ದೇವರನಾಡು; 300 ರ ಗಡಿ ದಾಟಿದ ಸಾವಿನ ಸಂಖ್ಯೆ

ಅಕ್ಷರಶಃ ನರಕವಾದ ದೇವರನಾಡು; 300 ರ ಗಡಿ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ಕೇರಳ: ದೇವರನಾಡು ಎಂದು ಕರೆಸಿಕೊಳ್ಳುವ ಕೇರಳ ಇದೀಗ ಅಕ್ಷರಶಃ ನರಕವಾಗಿದೆ. ವಯನಾಡಿನ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಮೃತರ ಸಂಖ್ಯೆ 300 ರ ಗಡಿ ದಾಟಿದೆ. ಈವರೆಗೆ 192 ಮಂದಿ ನಾಪತ್ತೆಯಾಗಿದ್ದರೇ, 1,592 ಜನರನ್ನು ರಕ್ಷಣೆ ಮಾಡಲಾಗಿದೆ.

192 ಮಂದಿ ನಾಪತ್ತೆಯಾಗಿದ್ದು, ಭೂಕುಸಿತದಲ್ಲಿ ಸಿಲುಕಿದ್ದಂತ 1,592 ಜನರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.8 ಸಾವಿರಕ್ಕೂ ಹೆಚ್ಚು ಜನರು ಕಾಳಜಿ ಕೇದ್ರ ಸ್ಥಳಾಂತರಿಸಲಾಗಿದೆ. 3,332 ಪುರುಷರು ಹಾಗೂ 3398 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. 82 ನಿರಾಶ್ರಿತರ ಶಿಬಿರವನ್ನು ತೆರೆಯಲಾಗಿದೆ. 8 ಕ್ಯಾಂಪ್ ಅನ್ನು ಚೋರ್ ಮಂಡಲಾದಲ್ಲಿ ಆರಂಭಿಸಲಾಗಿದೆ.

ಈವರೆಗೆ 1884 ಮಕ್ಕಳನ್ನು ರಕ್ಷಿಸಲಾಗಿದ್ದು, ಅವರನ್ನು ಕಾಳಜಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಗುಡ್ಡ ಕುಸಿತದಲ್ಲಿ ಸಂತ್ರಸ್ತರಾದಂತವರಿಗೆ ಅಗತ್ಯ ಸಾಮಗ್ರಿಗಳನ್ನು ಒದಗಿಸುವಂತ ವ್ಯವಸ್ಥೆಯನ್ನು ಕೇರಳ ಸರ್ಕಾರ, ಹೊರ ರಾಜ್ಯಗಳು ಮಾಡುತ್ತಿವೆ.

- Advertisement -

Latest News

error: Content is protected !!