Wednesday, June 3, 2026
Homeತಾಜಾ ಸುದ್ದಿರಾಜ್ಯ ಸರ್ಕಾರದಿಂದ ಆಟೋ-ಟ್ಯಾಕ್ಸಿ ಚಾಲಕರಿಗೆ ಶುಭಸುದ್ದಿ

ರಾಜ್ಯ ಸರ್ಕಾರದಿಂದ ಆಟೋ-ಟ್ಯಾಕ್ಸಿ ಚಾಲಕರಿಗೆ ಶುಭಸುದ್ದಿ

- Advertisement -
- Advertisement -

ಬೆಂಗಳೂರು: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿತ್ತು.

ಪರಿಹಾರ ಧನ ನೀಡುವ ಪ್ರಕ್ರಿಯೆ ಆರಂಭವಾಗಿದ್ದರೂ ಸಹ ಬಹಳಷ್ಟು ಆಟೋ ಹಾಗೂ ಟ್ಯಾಕ್ಸಿ ಚಾಲಕರು ತಮಗೆ ಈವರೆಗೆ ಹಣ ತಲುಪಿಲ್ಲ ಎಂದು ದೂರಿದ್ದರು.

ಇದರ ಮಧ್ಯೆ ರಾಜ್ಯ ಸರ್ಕಾರ ಪರಿಹಾರ ಧನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜುಲೈ 31 ರವರೆಗೆ ವಿಸ್ತರಿಸುವ ಮೂಲಕ ಶುಭಸುದ್ದಿ ನೀಡಿದೆ. ಈಗಾಗಲೇ ಬಹಳಷ್ಟು ಮಂದಿ ಸೇವಾ ಸಿಂಧು ಆಪ್ ನಲ್ಲಿ ನೋಂದಣಿ ಮಾಡಿದ್ದರೂ ಸಹ ಅವರ ಸಂಖ್ಯೆ ಕಡಿಮೆ ಇರುವುದರಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಾರಿಗೆ ಆಯುಕ್ತ ಶಿವಕುಮಾರ್ ತಿಳಿಸಿದ್ದಾರೆ.

- Advertisement -

Latest News

error: Content is protected !!