- Advertisement -
![]()
- Advertisement -
ಸುಳ್ಯ; ಬೈಕ್ ಮೋರಿಗೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಭಾನುವಾರ ರಾತ್ರಿ ನಡೆದಿದೆ. ಮೈಸೂರು ಮೂಲದ ಪವನ್ ಹಾಗೂ ಮನೋಜ್ ಮೃತ ಯುವಕರು.
ಪವನ್ ಹಾಗೂ ಮನೋಜ್ ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
- Advertisement -


